ಯಮುನಾ ನದಿ ಪ್ರವಾಹಕ್ಕೆ ನವದೆಹಲಿಯ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 14, 2023 | 12:18 PM

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರವಾಗಿದೆ.

ನವದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ(Delhi)ತತ್ತರವಾಗಿದೆ. ಹೌದು ಹಳೇ ದೆಹಲಿಯಿಂದ ನವದೆಹಲಿವರೆಗೂ ಯಮುನೆ ನೀರು ಪ್ರವೇಶಿಸಿದೆ. ಈ ಹಿನ್ನಲೆ ನವದೆಹಲಿಯ ITO ಬಳಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಆದಾಯ ತೆರಿಗೆ ಕಚೇರಿಗೂ ನೀರು ನುಗ್ಗಿದೆ. ಪರಿಣಾಮ ವಾಹನ ಸವಾರರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More