ಶಾರ್ಟ್ ಸರ್ಕ್ಯೂಟ್‌ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ
ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ ಪೆಡಿಗ್ರಿ ಗೋದಾಮು, ಎಸಿ ಸಾಮಗ್ರಿಗಳನ್ನು ಸಂಗ್ರಹಿಸುವ ಎಸಿ ಗೋದಾಮುಗಳು ಸೇರಿವೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಶೇಷವಾಗಿ, ಅಗ್ನಿ ಅವಘಡ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಎಚ್‌ಪಿ ಗ್ಯಾಸ್ ಸಿಲಿಂಡರ್ ಸಂಗ್ರಹವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವುಗಳನ್ನು ತಕ್ಷಣವೇ ಸ್ಥಳಾಂತರಿಸಲಾಗಿದೆ.
ನೆಲಮಂಗಲ, ಫೆಬ್ರವರಿ 22: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಒಂದು ಪ್ರಮುಖ ವೇರ್‌ಹೌಸ್ ಸಂಕೀರ್ಣದಲ್ಲಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಿಂದ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಭೀಕರ ಬೆಂಕಿ ಕಾಣಿಸಿಕೊಂಡಿದೆ.
ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ ಪೆಡಿಗ್ರಿ ಗೋದಾಮು, ಎಸಿ ಸಾಮಗ್ರಿಗಳನ್ನು ಸಂಗ್ರಹಿಸುವ ಎಸಿ ಗೋದಾಮುಗಳು ಸೇರಿವೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಶೇಷವಾಗಿ, ಅಗ್ನಿ ಅವಘಡ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಎಚ್‌ಪಿ ಗ್ಯಾಸ್ ಸಿಲಿಂಡರ್ ಸಂಗ್ರಹವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವುಗಳನ್ನು ತಕ್ಷಣವೇ ಸ್ಥಳಾಂತರಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ