ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?
ಮಕರ ಸಂಕ್ರಾಂತಿ ಹಬ್ಬದಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಸೂರ್ಯಾಭಿಷೇಕ ಹಾಗೂ ಸೂರ್ಯರಶ್ಮಿ ಸ್ಪರ್ಷದ ಕುರಿತು ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಮಾತನಾಡಿದ್ದಾರೆ. ಈ ವರ್ಷ ಸಂಕ್ರಾಂತಿಯು ಜನವರಿ 15ಕ್ಕೆ ಬಂದಿದ್ದು, ಸೂರ್ಯ ರಶ್ಮಿ ಸ್ಪರ್ಶವು ಸಂಜೆ 5.02 ರಿಂದ 5.05ರವರೆಗೆ ನಡೆಯಲಿದೆ.
ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದಂದು (ಜನವರಿ 15) ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ, ಸೂರ್ಯ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಸನ್ನಿವೇಶವು ಈ ವರ್ಷ ಸಂಜೆ 5:2 ರಿಂದ 5:5 ರವರೆಗೆ ನಡೆಯಲಿದೆ. ಸೂರ್ಯನ ಕಿರಣಗಳು ಶಿವಲಿಂಗದ ಪಾದದಿಂದ ಕೇಶದವರೆಗೆ ಸ್ಪರ್ಶಿಸುತ್ತವೆ. ಧನುರ್ಮಾಸದ ಪೂಜೆಯು ಇಂದು ಕೊನೆಗೊಳ್ಳಲಿದ್ದು, ಜನವರಿ 15ರಂದು ವಿಶೇಷ ಅಭಿಷೇಕಗಳು ನಡೆಯಲಿವೆ. ಭಕ್ತರಿಗೆ ಸೂರ್ಯ ರಶ್ಮಿ ಸ್ಪರ್ಶದ ನೇರ ದರ್ಶನಕ್ಕಾಗಿ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ.
ವರದಿ: ನಟರಾಜ್, ಟಿವಿ9 ಬೆಂಗಳೂರು
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
