ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ
ವಾಡಿಕೆಯಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ ಸೂರ್ಯ ರಶ್ಮಿ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದೆ. ಸುಮಾರು 2 ನಿಮಿಷ ಶಿವಲಿಂಗವನ್ನು ಸುರ್ಯ ರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ಮೋಡ ಕವಿದ ವಾತಾವರಣದಿಂದಾಗಿ 2025ರಲ್ಲಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲು ಸಾಧ್ಯವಾಗಿರಲಿಲ್ಲ.
ಬೆಂಗಳೂರು, ಜನವರಿ 15: ಮಕರ ಸಂಕ್ರಾಂತಿ ಹಿನ್ನೆಲೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದೆ. ಸಂಜೆ 5 ಗಂಟೆ 19 ನಿಮಿಷಕ್ಕೆ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ನಂದಿ ಕೊಂಬಿನ ಮೂಲಕ ಶಿವನ ಗರ್ಭಗೃಹ ಪ್ರವೇಶಿಸಿದ ಸೂರ್ಯರಶ್ಮಿ, ಸುಮಾರು 2 ನಿಮಿಷ ಶಿವಲಿಂಗವನ್ನು ಸ್ಪರ್ಶಿಸಿದೆ. ದೇವರ ದರ್ಶನಕ್ಕೆ ಸುಮಾರು 200 ಮೀಟರ್ನಷ್ಟು ಉದ್ದದ ಸರತಿ ಸಾಲಲ್ಲಿ ಭಕ್ತರು ನಿಂತಿದ್ದು, ದೇವಸ್ಥಾನದ ಆವರಣದಲ್ಲಿ LED ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಮೋಡ ಕವಿದ ವಾತಾವರಣದಿಂದಾಗಿ 2025ರಲ್ಲಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲು ಸಾಧ್ಯವಾಗಿರಲಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 15, 2026 05:43 PM
