ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಗೊಳಿಸಿ;​ ಪ್ರತಿ ಕಾರ್ಮಿಕನಿಗೆ 50 ಸಾವಿರ ಕೊಡ್ತೇನೆ ಎಂದ ಸಚಿವ ಜಮೀರ್ ಅಹ್ಮದ್

ತುಂಗಭದ್ರಾ ಡ್ಯಾಂ​ನ 19ನೇ ಕ್ರಸ್ಟ್​ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿ, ನಾಳೆ(ಆ.16) ಸ್ಟಾಪ್​ಲಾಗ್ ಗೇಟ್ ಅಳವಡಿಸಿ ಯಶಸ್ವಿಗೊಳಿಸಿ, ಪ್ರತಿಯೊಬ್ಬ ಕಾರ್ಮಿಕರಿಗೆ ವೈಯಕ್ತಿಕವಾಗಿ 50 ಸಾವಿರ ಕೊಡುತ್ತೇನೆ ಎಂದು ಧೈರ್ಯ ತುಂಬಿದ್ದಾರೆ.

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಗೊಳಿಸಿ;​ ಪ್ರತಿ ಕಾರ್ಮಿಕನಿಗೆ 50 ಸಾವಿರ ಕೊಡ್ತೇನೆ ಎಂದ ಸಚಿವ ಜಮೀರ್ ಅಹ್ಮದ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2024 | 10:31 PM

ವಿಜಯನಗರ, ಆ.15: ತುಂಗಭದ್ರಾ ಡ್ಯಾಂ​ನ 19ನೇ ಕ್ರಸ್ಟ್​ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಹೊಸ ಗೇಟ್ ಅಳವಡಿಸಲಾಗುತ್ತಿದ್ದು, ಇದೀಗ ಸ್ಥಳಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್(Zameer Ahmed) ಭೇಟಿ ನೀಡಿದ್ದಾರೆ. ಸ್ಟಾಪ್​ಲಾಗ್ ಗೇಟ್ ಕೂರಿಸಲು ತಜ್ಞರು ಹರಸಾಹಸ ಪಡುತ್ತಿದ್ದು, ತಜ್ಞ ಕನ್ನಯ್ಯ ನಾಯ್ಡು ತಂಡಕ್ಕೆ ಜಮೀರ್ ಧೈರ್ಯ ತುಂಬಿದ್ದಾರೆ. ಜೊತೆಗೆ ನಾಳೆ(ಆ.16) ಸ್ಟಾಪ್​ಲಾಗ್ ಗೇಟ್ ಅಳವಡಿಸಿ ಯಶಸ್ವಿಗೊಳಿಸಿ, ಪ್ರತಿಯೊಬ್ಬ ಕಾರ್ಮಿಕರಿಗೆ ವೈಯಕ್ತಿಕವಾಗಿ 50 ಸಾವಿರ ಕೊಡುತ್ತೇನೆ. ಧೈರ್ಯವಾಗಿ ಕೆಲಸಮಾಡಿ ಎಂದು ಆತ್ಮವಿಶ್ವಾಸ ತುಂಬಿದ್ದಾರೆ. ಸಚಿವ ಜಮೀರ್ ಅಹ್ಮದ್ ಹೇಳಿಕೆಯಿಂದ ಕಾರ್ಮಿಕರು ಫುಲ್​ ಖುಷಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us