ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಗೊಳಿಸಿ; ಪ್ರತಿ ಕಾರ್ಮಿಕನಿಗೆ 50 ಸಾವಿರ ಕೊಡ್ತೇನೆ ಎಂದ ಸಚಿವ ಜಮೀರ್ ಅಹ್ಮದ್
ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿ, ನಾಳೆ(ಆ.16) ಸ್ಟಾಪ್ಲಾಗ್ ಗೇಟ್ ಅಳವಡಿಸಿ ಯಶಸ್ವಿಗೊಳಿಸಿ, ಪ್ರತಿಯೊಬ್ಬ ಕಾರ್ಮಿಕರಿಗೆ ವೈಯಕ್ತಿಕವಾಗಿ 50 ಸಾವಿರ ಕೊಡುತ್ತೇನೆ ಎಂದು ಧೈರ್ಯ ತುಂಬಿದ್ದಾರೆ.
ವಿಜಯನಗರ, ಆ.15: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಹೊಸ ಗೇಟ್ ಅಳವಡಿಸಲಾಗುತ್ತಿದ್ದು, ಇದೀಗ ಸ್ಥಳಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್(Zameer Ahmed) ಭೇಟಿ ನೀಡಿದ್ದಾರೆ. ಸ್ಟಾಪ್ಲಾಗ್ ಗೇಟ್ ಕೂರಿಸಲು ತಜ್ಞರು ಹರಸಾಹಸ ಪಡುತ್ತಿದ್ದು, ತಜ್ಞ ಕನ್ನಯ್ಯ ನಾಯ್ಡು ತಂಡಕ್ಕೆ ಜಮೀರ್ ಧೈರ್ಯ ತುಂಬಿದ್ದಾರೆ. ಜೊತೆಗೆ ನಾಳೆ(ಆ.16) ಸ್ಟಾಪ್ಲಾಗ್ ಗೇಟ್ ಅಳವಡಿಸಿ ಯಶಸ್ವಿಗೊಳಿಸಿ, ಪ್ರತಿಯೊಬ್ಬ ಕಾರ್ಮಿಕರಿಗೆ ವೈಯಕ್ತಿಕವಾಗಿ 50 ಸಾವಿರ ಕೊಡುತ್ತೇನೆ. ಧೈರ್ಯವಾಗಿ ಕೆಲಸಮಾಡಿ ಎಂದು ಆತ್ಮವಿಶ್ವಾಸ ತುಂಬಿದ್ದಾರೆ. ಸಚಿವ ಜಮೀರ್ ಅಹ್ಮದ್ ಹೇಳಿಕೆಯಿಂದ ಕಾರ್ಮಿಕರು ಫುಲ್ ಖುಷಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ