ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸಿಎಂಗೆ ಮನವಿ

Updated on: Sep 02, 2025 | 8:40 PM

ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ. ನಟಿಯರಾದ ಶ್ರುತಿ, ಜಯಮಾಲಾ, ಮಾಳವಿಕಾ ಅವರು ಇಂದು (ಸೆಪ್ಟೆಂಬರ್ 2) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ವಿಷ್ಣುವರ್ಧನ್ (Vishnuvardhan) ಹಾಗೂ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ (Karnataka Ratna) ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಇಂದು (ಸೆಪ್ಟೆಂಬರ್ 2) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಕ್ಯಾಬಿನೆಟ್​​ನಲ್ಲಿ ಈ ಕುರಿತು ಚರ್ಚೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇದರಿಂದ ನಮಗೆ ಖುಷಿ ಆಗಿದೆ’ ಎಂದು ಜಯಮಾಲಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.