AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಮದನ್​ ಕುಮಾರ್​
|

Updated on: Jun 23, 2026 | 10:41 PM

Share

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಮ್ಮುಟ್ಟಿಗೆ ‘ಪದ್ಮಭೂಷಣ’ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಮ್ಮುಟ್ಟಿ ಹಾಗೂ ಅವರ ಕುಟುಂಬದವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಶುಭ ಹಾರೈಸಿದರು. ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ನವದೆಹಲಿ: ಮಲಯಾಳಂ ಚಿತ್ರರಂಗದ ಖ್ಯಾತ ಹಿರಿಯ ನಟ ಮಮ್ಮುಟ್ಟಿ (Mammootty) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಭೂಷಣ’ ಪ್ರದಾನ ಮಾಡಲಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ (ಜೂನ್ 23) ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಮ್ಮುಟ್ಟಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು. ಈ ಕ್ಷಣಕ್ಕೆ ಸಾಕ್ಷಿಯಾಗಲು ಮಮ್ಮುಟ್ಟಿ ಅವರ ಪತ್ನಿ ಸುಲ್ಫತ್, ಮಗ ದುಲ್ಕರ್ ಸಲ್ಮಾನ್ ಮತ್ತು ಮಗಳು ಸುರುಮಿ ಅವರು ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದರು. ವೇದಿಕೆಯಲ್ಲಿ ಮಮ್ಮುಟ್ಟಿ ಅವರು ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ, ಸಭಾಂಗಣದಲ್ಲಿದ್ದ ಮಗ ದುಲ್ಕರ್ ಸಲ್ಮಾನ್ ಮತ್ತು ಕುಟುಂಬದವರು ಹೆಮ್ಮೆಯಿಂದ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಮ್ಮುಟ್ಟಿ ಹಾಗೂ ಅವರ ಕುಟುಂಬದವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಶುಭ ಹಾರೈಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us