ಅಣ್ಣಾವ್ರ ಹಾಡನ್ನು ಹಾಡಲು ಪ್ರಯತ್ನಿಸಿದ ಮಲಯಾಳಂ ನಟ ಮೋಹನ್​ಲಾಲ್; ಇಲ್ಲಿದೆ ವಿಡಿಯೋ

Edited By:

Updated on: May 20, 2024 | 11:05 AM

ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..’ ಹಾಡನ್ನು ಹಾಡಲು ಪ್ರಯತ್ನಿಸಿದ್ದಾರೆ ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಮೋಹನ್​ಲಾಲ್ (Mohanlal) ಅವರು ಮಲಯಾಳಂನ ಸೂಪರ್​ ಸ್ಟಾರ್. ಅವರಿಗೆ ವರನಟ ಡಾ. ರಾಜ್​ಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಇತ್ತು. ಇದಕ್ಕೆ ಸಾಕ್ಷಿ ಎಂಬಂತೆ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮೋಹನ್​ಲಾಲ್ ಅವರು ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..’ ಹಾಡನ್ನು ಹಾಡಲು ಪ್ರಯತ್ನಿಸಿದ್ದಾರೆ. ಸದ್ಯ ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಮೋಹನ್​ಲಾಲ್ ಅವರು ಮಲಯಾಳಂನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಕನ್ನಡದಲ್ಲೂ ಅಭಿಮಾನಿಗಳು ಇದ್ದಾರೆ. ಮೇ 21ರಂದು ಮೋಹನ್​ಲಾಲ್ ಜನ್ಮದಿನ. ಅವರಿಗೆ ಎಲ್ಲರೂ ಅಡ್ವಾನ್ಸ್ ಆಗಿ ಶುಭಾಶಯ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More