82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್ಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್
ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್‌ಲಾಲ್ ಅವರು ಅಮೆರಿಕದಲ್ಲಿ ನಡೆದ ಫಿಫಾ ವಿಶ್ವಕಪ್ ಫುಟ್‌ಬಾಲ್ ಫೈನಲ್ ಪಂದ್ಯವನ್ನು ಕ್ರೀಡಾಂಗಣದಲ್ಲಿ ಖುದ್ದಾಗಿ ವೀಕ್ಷಿಸಿದ್ದಾರೆ. ಸುಮಾರು 82 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರಿಂದ ತುಂಬಿ ತುಳುಕುತ್ತಿದ್ದ ಸ್ಟೇಡಿಯಂನಲ್ಲಿ ಕುಳಿತು, ಅವರು ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ರೋಮಾಂಚನಕಾರಿ ಪಂದ್ಯವನ್ನು ಕಣ್ಣುಂಬಿಕೊಂಡಿದ್ದಾರೆ.
ಅಮೆರಿಕದ ಮೆಟ್ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿತ್ತು. ಈ ಐತಿಹಾಸಿಕ ಪಂದ್ಯವನ್ನು ವೀಕ್ಷಿಸಲು ಭಾರತೀಯ ಚಿತ್ರರಂಗದ ದಿಗ್ಗಜ ನಟ ಮೋಹನ್‌ಲಾಲ್ ಕ್ರೀಡಾಂಗಣಕ್ಕೆ ತೆರಳಿದ್ದರು. ಸ್ಟೇಡಿಯಂನಲ್ಲಿ ನೆರೆದಿದ್ದ 82 ಸಾವಿರಕ್ಕೂ ಅಧಿಕ ಫುಟ್‌ಬಾಲ್ ಅಭಿಮಾನಿಗಳ ಮಧ್ಯೆ ಕುಳಿತು ಅವರು ಪಂದ್ಯದ ಪ್ರತಿ ಕ್ಷಣವನ್ನು ಎಂಜಾಯ್ ಮಾಡಿದ್ದಾರೆ.
ಫಿಫಾ ಲೋಗೋ ಇರುವ ವಿಶೇಷ ಕ್ಯಾಪ್ ಧರಿಸಿ ಪಂದ್ಯ ವೀಕ್ಷಿಸುತ್ತಿರುವ ವಿಡಿಯೋವನ್ನು ಮೋಹನ್‌ಲಾಲ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಕಪ್‌ನ ಭವ್ಯ ವಾತಾವರಣ ಮತ್ತು ಅಭಿಮಾನಿಗಳ ಜೋಶ್ ಕಂಡು ಅವರು ರೋಮಾಂಚನಗೊಂಡಿದ್ದಾರೆ. ಕೇರಳದವರು ಫುಟ್ಬಾಲ್ನ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಾರೆ. ಅದೇ ರೀತಿ ಮೋಹನ್‌ಲಾಲ್ ಕೂಡ ಫುಟ್‌ಬಾಲ್ ಅಭಿಮಾನಿ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. (Source: Mohanlal)
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 20, 2026 10:26 AM
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ

