AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ

ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jun 15, 2026 | 10:42 AM

Share

ಸೋಮವಾರದ ಶುಭ ದಿನದಂದೇ ಮಹಾ ಅಮಾವಾಸ್ಯೆ ಬಂದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದಿದ್ದಾರೆ. ಮಾದಪ್ಪನ ದರ್ಶನ ಪಡೆದ ಭಕ್ತರು ವಿಶೇಷ ಎಣ್ಣೆ ಮಜ್ಜನ, ಚಿನ್ನ ಹಾಗೂ ಬೆಳ್ಳಿ ತೇರು ಸೇವೆಗಳನ್ನು ನೆರವೇರಿಸಿ ಪುನೀತರಾಗಿದ್ದಾರೆ.

ಚಾಮರಾಜನಗರ, ಜೂನ್ 15: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪವಿತ್ರ ಪುಣ್ಯಕ್ಷೇತ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಭಕ್ತರ ಮಹಾಪೂರವೇ ಹರಿದುಬಂದಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರದಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತವೆ. ಆದರೆ, ಈ ಬಾರಿ ಸೋಮವಾರದಂದೇ ಅಮಾವಾಸ್ಯೆ ಒದಗಿ ಬಂದಿರುವುದರಿಂದ ಮಾದಪ್ಪನ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ.

ಅಮಾವಾಸ್ಯೆಯ ವಿಶೇಷ ದಿನವಾದ ಇಂದು ಮುಂಜಾನೆಯಿಂದಲೇ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಎಣ್ಣೆ ಮಜ್ಜನ (ಅಭಿಷೇಕ) ಹಾಗೂ ಅತ್ಯಂತ ಆಕರ್ಷಕ ಪುಷ್ಪಾಲಂಕಾರಗಳನ್ನು ನೆರವೇರಿಸಲಾಯಿತು. ಸಹಸ್ರಾರು ಭಕ್ತರು ಏಕಕಾಲದಲ್ಲಿ ಬೆಟ್ಟಕ್ಕೆ ಲಗ್ಗೆ ಇಟ್ಟಿರುವುದರಿಂದ ಮಲೆ ಮಹದೇಶ್ವರ ಬೆಟ್ಟದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣವು ಸಂಪೂರ್ಣವಾಗಿ ಜನಸಾಗರದಿಂದ ತುಂಬಿ ತುಳುಕುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 15, 2026 10:38 AM

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More