ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ!
ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ. ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ.
ಚಾಮರಾಜನಗರ, ಜೂನ್ 18: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ.
ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ ಹಳೆಯ ನೋಟುಗಳು ಪತ್ತೆಯಾಗಿವೆ. ಮಲೆ ಮಹದೇಶ್ವರ ಪ್ರಾಧಿಕಾರದ ಸಿಬ್ಬಂದಿ ಸಮ್ಮುಖದಲ್ಲಿ ಈ ಬೃಹತ್ ಮೊತ್ತದ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಜರುಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jun 18, 2026 10:00 AM
Follow Us