AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಮಾದರಿಯಂತೆ ಸಿದ್ಧವಾಗಲಿದೆ ಮಾದಪ್ಪನ ಸನ್ನಿಧಾನ

ತಿರುಪತಿ ಮಾದರಿಯಂತೆ ಸಿದ್ಧವಾಗಲಿದೆ ಮಾದಪ್ಪನ ಸನ್ನಿಧಾನ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 23, 2026 | 8:26 PM

Share

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತೀ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ವಿಶೇಷ ಜಾತ್ರೆಗಳ ಸಮಯದಲ್ಲಿ ಹೆಚ್ಚುವ ಭಕ್ತರ ದಟ್ಟಣೆಯನ್ನು ನಿರ್ವಹಿಸಲು, ಪ್ರಾಧಿಕಾರವು 30 ಕೋಟಿ ರೂ ವೆಚ್ಚದಲ್ಲಿ ತಿರುಪತಿ ಮಾದರಿಯ ನಾಲ್ಕು ಬೃಹತ್ ಬ್ಲಾಕ್‌ಗಳನ್ನು ನಿರ್ಮಿಸಿದೆ. ಇದು ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಭಕ್ತರ ದರ್ಶನವನ್ನು ಸುಗಮಗೊಳಿಸುತ್ತದೆ.

ಚಾಮರಾಜನಗರ, ಸೆಪ್ಟೆಂಬರ್​ 23: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹಾದೇಶ್ವರ ಬೆಟ್ಟಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಸುಗಮ ಹಾಗೂ ಶಿಸ್ತುಬದ್ಧ ದರ್ಶನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ತಿರುಪತಿ ಮಾದರಿಯಲ್ಲಿ ನೂತನ ಕ್ಯೂ ಕಾಂಪ್ಲೆಕ್ಸ್ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಮಲೆ ಮಹಾದೇಶ್ವರ ಅಭಿವೃದ್ಧಿ ಪ್ರಾಧಿಕಾರ ಮತ್ತು ಸ್ಥಳೀಯ ಶಾಸಕ ಎಂ.ಆರ್. ಮಂಜುನಾಥ್ ಅವರ ಯೋಜನೆಯಂತೆ ಸುಮಾರು 30 ಕೋಟಿ ರೂ ಅಂದಾಜು ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ತಿರುಪತಿಯಲ್ಲಿರುವಂತೆ ಇಲ್ಲಿಯೂ 4 ಬೃಹತ್ ಬ್ಯಾರಕ್​ಗಳನ್ನು ನಿರ್ಮಿಸಲಾಗಿದ್ದು, ಒಂದೊಂದು ಬ್ಲಾಕ್‌ನಲ್ಲಿ ಸುಮಾರು 1,000 ಮಂದಿಯಂತೆ ಒಟ್ಟು 4,000 ಭಕ್ತರು ಏಕಕಾಲದಲ್ಲಿ ಕುಳಿತುಕೊಳ್ಳಲು ಕುಳಿತುಕೊಳ್ಳಲು ಸ್ಥಳಾವಕಾಶವಿರಲಿದೆ. ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ಈ ಬ್ಲಾಕ್‌ಗಳಲ್ಲಿ ಕುಡಿಯುವ ನೀರು, ಪ್ರಸಾದ ಹಾಗೂ ಶೌಚಾಲಯದಂತಹ ಸೌಕರ್ಯಗಳನ್ನು ಒದಗಿಸಲಾಗಿದ್ದು, ಮುಖ್ಯ ದರ್ಶನದ ಸಾಲು ಖಾಲಿಯಾಗುತ್ತಿದ್ದಂತೆ ಬ್ಲಾಕ್‌ನಲ್ಲಿರುವವರನ್ನು ಸರದಿಯಂತೆ ದರ್ಶನಕ್ಕೆ ಬಿಡಲಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More