ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!

Edited By:

Updated on: Sep 23, 2026 | 10:25 AM

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, 34 ದಿನಗಳಲ್ಲಿ ಬರೋಬ್ಬರಿ 2,21,62,915 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಇದರೊಂದಿಗೆ 68.5 ಗ್ರಾಂ ಚಿನ್ನ ಹಾಗೂ 1 ಕೆ.ಜಿ. 913 ಗ್ರಾಂ ಬೆಳ್ಳಿಯನ್ನೂ ಭಕ್ತರು ಅರ್ಪಿಸಿದ್ದಾರೆ. ಹುಂಡಿ ಎಣಿಕೆಯ ವಿಡಿಯೋ ಇಲ್ಲಿದೆ.

ಚಾಮರಾಜನಗರ, ಸೆಪ್ಟೆಂಬರ್ 23: ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಕೇವಲ 34 ದಿನಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಹಣ ಸಂಗ್ರಹವಾಗಿದೆ. ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು ₹2,21,62,915 ಕಾಣಿಕೆ ಹಣ ಸಂಗ್ರಹವಾಗಿದೆ. ಆಗಸ್ಟ್ 19ರಿಂದ ಸೆಪ್ಟೆಂಬರ್ 21ರವರೆಗೆ 34 ದಿನಗಳ ಅವಧಿಯಲ್ಲಿ ಭಕ್ತರು ಈ ಕಾಣಿಕೆಯನ್ನು ಅರ್ಪಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಕಾಣಿಕೆ ಹಣದ ಜತೆಗೆ ಭಕ್ತರು ಮಾದಪ್ಪನಿಗೆ ಚಿನ್ನ ಮತ್ತು ಬೆಳ್ಳಿಯನ್ನೂ ಅರ್ಪಿಸಿದ್ದಾರೆ. ಹುಂಡಿಯಲ್ಲಿ 68.5 ಗ್ರಾಂ ಚಿನ್ನ ಹಾಗೂ 1 ಕೆ.ಜಿ. 913 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗುವುದರೊಂದಿಗೆ ಮಲೆಯ ಮಾದಪ್ಪ ಮತ್ತೆ ಕೋಟ್ಯಾಧಿಪತಿಯಾಗಿದ್ದಾನೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದು, ವಿವಿಧೆಡೆಯಿಂದ ಆಗಮಿಸುವ ಭಕ್ತರು ಮಾದಪ್ಪನಿಗೆ ಕಾಣಿಕೆ ಅರ್ಪಿಸುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More