Male Mahadeswara Hundi: ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!

Edited By:

Updated on: Jul 29, 2026 | 9:07 AM

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಅರ್ಪಿಸಿದ ಕಾಣಿಕೆಯ ಮೊತ್ತವು 3 ಕೋಟಿ 37 ಲಕ್ಷ ರೂಪಾಯಿಗಳನ್ನು ದಾಟಿದೆ. ಜೂನ್ 17 ರಿಂದ ಜುಲೈ 27 ರವರೆಗಿನ 41 ದಿನಗಳ ಅವಧಿಯಲ್ಲಿ ಸಂಗ್ರಹವಾದ ಕಾಣಿಕೆ ಇದಾಗಿದೆ. ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ನೇತೃತ್ವದಲ್ಲಿ ಈ ಹುಂಡಿ ಎಣಿಕೆ ಕಾರ್ಯವು ನಿನ್ನೆ ಬೆಳಿಗ್ಗೆಯಿಂದ ತಡರಾತ್ರಿಯವರೆಗೂ ನಡೆಯಿತು. ನಗದು ಕಾಣಿಕೆ ಜೊತೆಗೆ ಭಕ್ತರು 58 ಗ್ರಾಂ ಚಿನ್ನ ಮತ್ತು 1 ಕೆ.ಜಿ 250 ಗ್ರಾಂ ಬೆಳ್ಳಿ ಆಭರಣಗಳನ್ನು ಸಹ ಹುಂಡಿಯಲ್ಲಿ ಸಮರ್ಪಿಸಿದ್ದಾರೆ.

ಚಾಮರಾಜನಗರ, ಜುಲೈ 29: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಅರ್ಪಿಸಿದ ಕಾಣಿಕೆಯ ಮೊತ್ತವು 3 ಕೋಟಿ 37 ಲಕ್ಷ ರೂಪಾಯಿಗಳನ್ನು ದಾಟಿದೆ. ಜೂನ್ 17 ರಿಂದ ಜುಲೈ 27 ರವರೆಗಿನ 41 ದಿನಗಳ ಅವಧಿಯಲ್ಲಿ ಸಂಗ್ರಹವಾದ ಕಾಣಿಕೆ ಇದಾಗಿದೆ. ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ನೇತೃತ್ವದಲ್ಲಿ ಈ ಹುಂಡಿ ಎಣಿಕೆ ಕಾರ್ಯವು ನಿನ್ನೆ ಬೆಳಿಗ್ಗೆಯಿಂದ ತಡರಾತ್ರಿಯವರೆಗೂ ನಡೆಯಿತು. ನಗದು ಕಾಣಿಕೆ ಜೊತೆಗೆ ಭಕ್ತರು 58 ಗ್ರಾಂ ಚಿನ್ನ ಮತ್ತು 1 ಕೆ.ಜಿ 250 ಗ್ರಾಂ ಬೆಳ್ಳಿ ಆಭರಣಗಳನ್ನು ಸಹ ಹುಂಡಿಯಲ್ಲಿ ಸಮರ್ಪಿಸಿದ್ದಾರೆ.

ಪ್ರತಿ 41 ದಿನಗಳಿಗೊಮ್ಮೆ ನಡೆಯುವ ಹುಂಡಿ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುತ್ತದೆ. ಈ ಬಾರಿ ಸಂಗ್ರಹವಾದ ಕಾಣಿಕೆಯು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗವಾಗಲಿದೆ. ಮಾದಪ್ಪನ ಸನ್ನಿಧಿಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ತಮ್ಮ ಶ್ರದ್ಧಾ ಭಕ್ತಿಯಿಂದ ಕಾಣಿಕೆಗಳನ್ನು ಸಲ್ಲಿಸುತ್ತಿದ್ದಾರೆ. ಈ ಬಾರಿ ಸಂಗ್ರಹವಾದ ಕಾಣಿಕೆ ಮೊತ್ತವು ಹಿಂದಿನ ಅವಧಿಗಳಿಗೆ ಹೋಲಿಸಿದರೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More