ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!

Edited By:

Updated on: Apr 26, 2026 | 10:10 AM

ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ದಿನೇದಿನೇ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಡಿ ಭಾಗದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಗಡೆ ಶಾಲೆ ಸಮೀಪ ಒಂಟಿ ಕೋರೆ ಸಲಗ ರಸ್ತೆ ಮೇಲೆ ಬಿಂದಾಸ್ ಸಂಚಾರ ನಡೆಸಿ, ಜನರಲ್ಲಿ ಭೀತಿ ಉಂಟುಮಾಡಿದೆ. ದೇವನಗೂಲ್ ಹಾಗೂ ವಗಡೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಆನೆ ಓಡಾಡುತ್ತಿರುವುದು ಸ್ಥಳೀಯರ ನಿದ್ರೆ ಕೆಡಿಸಿದೆ. ಅಲ್ಲದೆ ಆನೆ ಜನವಸತಿ ಪ್ರದೇಶಗಳತ್ತ ಬರುತ್ತಿರುವ ಹಿನ್ನೆಲೆಯಲ್ಲಿ ಜೀವಭಯ ಹೆಚ್ಚಾಗಿದೆ. ಕೂಡಲೇ ಈ ಕೋರೆ ಸಲಗವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಘಟನೆ ಮೂಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಮಗಳೂರು, ಏಪ್ರಿಲ್ 26: ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ದಿನೇದಿನೇ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಡಿ ಭಾಗದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಗಡೆ ಶಾಲೆ ಸಮೀಪ ಒಂಟಿ ಕೋರೆ ಸಲಗ ರಸ್ತೆ ಮೇಲೆ ಬಿಂದಾಸ್ ಸಂಚಾರ ನಡೆಸಿ, ಜನರಲ್ಲಿ ಭೀತಿ ಉಂಟುಮಾಡಿದೆ. ದೇವನಗೂಲ್ ಹಾಗೂ ವಗಡೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಆನೆ ಓಡಾಡುತ್ತಿರುವುದು ಸ್ಥಳೀಯರ ನಿದ್ರೆ ಕೆಡಿಸಿದೆ. ಅಲ್ಲದೆ ಆನೆ ಜನವಸತಿ ಪ್ರದೇಶಗಳತ್ತ ಬರುತ್ತಿರುವ ಹಿನ್ನೆಲೆಯಲ್ಲಿ ಜೀವಭಯ ಹೆಚ್ಚಾಗಿದೆ. ಕೂಡಲೇ ಈ ಕೋರೆ ಸಲಗವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಘಟನೆ ಮೂಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us