ಮಲ್ಲಮ್ಮನಿಂದಲೇ ನಾಮಿನೇಟ್ ಆದ ಗಿಲ್ಲಿ ನಟ; ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ

Updated on: Oct 03, 2025 | 4:57 PM

ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ನಾಮಿನೇಷನ್ ಪ್ರಕ್ರಿಯೆ ಆರಂಭ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಲ್ಲಿ ಮೊದಲು ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಗಿಲ್ಲಿ ನಟ ಅವರನ್ನು ಮಲ್ಲಮ್ಮ ನಾಮಿನೇಟ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ನಾಮಿನೇಷನ್ ಪ್ರಕ್ರಿಯೆ ಶುರು ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಮೊದಲು ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಗಿಲ್ಲಿ ನಟ (Gilli Nata) ಅವರನ್ನು ಮಲ್ಲಮ್ಮ ನಾಮಿನೇಟ್ ಮಾಡಿದ್ದಾರೆ. ಈ ರೀತಿ ಆಗುತ್ತದೆ ಎಂದು ಗಿಲ್ಲಿ ಊಹಿಸಿರಲಿಲ್ಲ. ನಾಮಿನೇಟ್ ಪರಿಣಾಮ ಏನು ಎಂಬುದನ್ನು ಸರಿಯಾಗಿ ತಿಳಿದಿರದ ಮಲ್ಲಮ್ಮ (Mallamma) ಅವರು ಗಿಲ್ಲಿ ಹೆಸರನ್ನು ತೆಗೆದುಕೊಂಡಿದ್ದಾರೆ. ಪರಿಣಾಮವನ್ನು ಮಲ್ಲಮ್ಮನಿಗೆ ವಿವರಿಸಿ ಹೇಳಿದ ಗಿಲ್ಲಿ ಅವರು ಕಣ್ಣೀರು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More