ಅಬ್ಬಾ ಜಸ್ಟ್ ಮಿಸ್! ಚಾಲಕನ ನಿಯಂತ್ರಣ ತಪ್ಪಿ ಕಾಂಡಿಮೆಂಟ್ಸ್ ಅಂಗಡಿಗೆ ನುಗ್ಗಿದ ಮಿನಿ ಲಾರಿ
ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾಂಡಿಮೆಂಟ್ಸ್ ಅಂಗಡಿಗೆ ನುಗ್ಗಿದ ಘಟನೆ ಮಲ್ಲೇಶ್ವರಂನ ಲಿಂಕ್ ರಸ್ತೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿಲ್ಲ. ಅಂಗಡಿಯಲ್ಲಿದ್ದ ವಸ್ತುಗಳು ಹಾಳಾಗಿ ಸಾವಿರಾರು ರೂ. ನಷ್ಟ ಉಂಟಾಗಿದೆ. ಸದ್ಯ ಪರಾರಿಯಾಗಿರುವ ಚಾಲಕನಿಗಾಗಿ ಶೋಧ ನಡೆಯುತ್ತಿದೆ. ಘಟನೆಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಸೆಪ್ಟೆಂಬರ್ 11: ಬೆಂಗಳೂರಿನ ಮಲ್ಲೇಶ್ವರಂನ ಲಿಂಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಕಾಂಡಿಮೆಂಟ್ಸ್ ಅಂಗಡಿಗೆ ನುಗ್ಗಿದೆ. ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಕಾಂಡಿಮೆಂಟ್ಸ್ ಅಂಗಡಿ ಮಾಲೀಕರಿಗೆ ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ.
Latest Videos

