ಒಂದೇ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್

Updated on: Nov 25, 2025 | 11:13 AM

ಬೆಂಗಳೂರಿನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ಕಾರಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಟ್ಟಿಗೆ ಏರ್​​ಪೋರ್ಟ್ ವಿಐಪಿ ಟರ್ಮಿನಲ್ ಒಳಗಡೆ ತೆರಳಿದ್ದಾರೆ. ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿರುವ ಈ ಹೊತ್ತಲ್ಲೇ ಈ ಬೆಳವಣಿಗೆ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, ನವೆಂಬರ್ 25: ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ದೆಹಲಿಗೆ ಹೊರಟಿದ್ದಾರೆ. ರಾಜ್ಯ ಕಾಂಗ್ರೆಸ್​​ ಬಿಕ್ಕಟ್ಟಿನ ಬಗ್ಗೆ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜತೆ ಇಂದು ಚರ್ಚೆ ನಡೆಸುವ ನಿರೀಕ್ಷೆ ಇದೆ. ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಜತೆಗೆ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಏರ್​ಪೋರ್ಟ್​ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ