ಬೆಂಗಳೂರಿಂದ ಮೈಸೂರಿಗೆ ವಿಶೇಷ ವಿಮಾನವೊಂದರಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ; ಡಿಕೆ ಶಿವಕುಮಾರ್ ಜೊತೆ ಆಗಮಿಸಿದರು
ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣ್ಯರನ್ನು ಸ್ವಾಗತಿಸಿದರು. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಅವುಗಳಲ್ಲಿ ಅನ್ನಭಾಗ್ಯ, ಶಕ್ತಿಯೋಜನೆ ಮತ್ತು ಗೃಹ ಜ್ಯೋತಿ ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಿದ್ದು ಇಂದು ಮೈಸೂರಲ್ಲಿ ನಾಲ್ಕನೇ ಯೋಜನೆ ಗೃಹ ಜ್ಯೋತಿಯನ್ನು ಅನುಷ್ಠಾನಗೊಳಿಸುತ್ತಿದೆ.
ಮೈಸೂರು: ನಗರದಲ್ಲಿ ಆಯೋಜಿಸಲಾಗಿರುವ ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗ್ಗೆ ಸ್ವಲ್ಪ ಹೊತ್ತಿಗೆ ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಸಂಸದ ರಾಹುಲ್ ಗಾಂಧಿ (Rahul Gandhi) ಆಗಮಿಸಿದರು. ಬೆಂಗಳೂರುನಿಂದ ವಿಶೇಷ ವಿಮಾನವೊಂದರಲ್ಲಿ ಖರ್ಗೆ ಮತ್ತು ರಾಹುಲ್; ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಅವರೊಂದಿಗೆ ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣ್ಯರನ್ನು ಸ್ವಾಗತಿಸಿದರು. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಅವುಗಳಲ್ಲಿ ಅನ್ನಭಾಗ್ಯ, ಶಕ್ತಿಯೋಜನೆ ಮತ್ತು ಗೃಹ ಜ್ಯೋತಿ ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಿದ್ದು ಇಂದು ಮೈಸೂರಲ್ಲಿ ನಾಲ್ಕನೇ ಯೋಜನೆ ಗೃಹ ಜ್ಯೋತಿಯನ್ನು ಅನುಷ್ಠಾನಗೊಳಿಸುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ