Gujarat Plane Crash: ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾದ ಖರ್ಗೆ ಮತ್ತು ಶಿವಕುಮಾರ್
ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವಿಶ್ವಾಸ್ ಕುಮಾರ್ ಅರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಮಲ್ಲಿಕಾರ್ಜುನ ಖರ್ಗೆ, ದುರಂತದಲ್ಲಿ ಮೃತ ಪಟ್ಟ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಸಂತಾಪ ಸೂಚಿಸುತ್ತೇನೆ, ನಿಖರವಾಗಿ ಎಷ್ಟು ವಿದ್ಯಾರ್ಥಿಗಳು ಸತ್ತಿದ್ದಾರೆಂದು ಗೊತ್ತಾಗುತ್ತಿಲ್ಲ, ಗಾಯಗೊಂಡಿರುವ ವಿದ್ಯಾರ್ಥಿಗಳು ಮತ್ತು ರಮೇಶ್ ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ಅಹಮದಾಬಾದ್, ಜೂನ್ 14: ಬೆಳಗ್ಗೆ ಯಾದಗಿರಿಯಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿಗೆ ಬಂದು ನಂತರ ಅಲ್ಲಿಂದ ಅಹ್ಮದಾಬಾದ್ಗೆ ಬಂದಿದ್ದಾರೆ. ಗುರುವಾರ ನಗರದಲ್ಲಿ ನಡೆದ ವಿಮಾನ ದುರ್ಘಟನೆಯಲ್ಲಿ ಗಾಯಗೊಂಎಡಿರುವ ಬಿಜೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲದೆ ವಿಮಾನ ದುರಂತದಲ್ಲಿ ಪವಾಡಸದೃಶ ರೀತಿಯಲ್ಲಿ ಬದುಕುಳಿದಿರುವ ವಿಶ್ವಾಸ್ ಕುಮಾರ್ ರಮೇಶ್ ಕೂಡ ಇದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎಲ್ಲ ಗಾಯಾಳುಗಳನ್ನು ಖರ್ಗೆ ಮತ್ತು ಶಿವಕುಮಾರ್ ಮಾತಾಡಿಸಿ ಅರೋಗ್ಯ ವಿಚಾರಿಸಿದರು.
ಇದನ್ನೂ ಓದಿ: Gujarat Plane Crash: ವಿಮಾನ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆ ಅಪ್ಪಳಿಸಿದ್ದರಿಂದ ಬಾಂಬ್ ಸ್ಫೋಟಿಸಿದಂಥ ಸದ್ದು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ