Gujarat Plane Crash: ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾದ ಖರ್ಗೆ ಮತ್ತು ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 14, 2025 | 7:18 PM

ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವಿಶ್ವಾಸ್ ಕುಮಾರ್ ಅರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಮಲ್ಲಿಕಾರ್ಜುನ ಖರ್ಗೆ, ದುರಂತದಲ್ಲಿ ಮೃತ ಪಟ್ಟ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಸಂತಾಪ ಸೂಚಿಸುತ್ತೇನೆ, ನಿಖರವಾಗಿ ಎಷ್ಟು ವಿದ್ಯಾರ್ಥಿಗಳು ಸತ್ತಿದ್ದಾರೆಂದು ಗೊತ್ತಾಗುತ್ತಿಲ್ಲ, ಗಾಯಗೊಂಡಿರುವ ವಿದ್ಯಾರ್ಥಿಗಳು ಮತ್ತು ರಮೇಶ್ ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

ಅಹಮದಾಬಾದ್, ಜೂನ್ 14: ಬೆಳಗ್ಗೆ ಯಾದಗಿರಿಯಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿಗೆ ಬಂದು ನಂತರ ಅಲ್ಲಿಂದ ಅಹ್ಮದಾಬಾದ್​ಗೆ ಬಂದಿದ್ದಾರೆ. ಗುರುವಾರ ನಗರದಲ್ಲಿ ನಡೆದ ವಿಮಾನ ದುರ್ಘಟನೆಯಲ್ಲಿ ಗಾಯಗೊಂಎಡಿರುವ ಬಿಜೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲದೆ ವಿಮಾನ ದುರಂತದಲ್ಲಿ ಪವಾಡಸದೃಶ ರೀತಿಯಲ್ಲಿ ಬದುಕುಳಿದಿರುವ ವಿಶ್ವಾಸ್ ಕುಮಾರ್ ರಮೇಶ್ ಕೂಡ ಇದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎಲ್ಲ ಗಾಯಾಳುಗಳನ್ನು ಖರ್ಗೆ ಮತ್ತು ಶಿವಕುಮಾರ್ ಮಾತಾಡಿಸಿ ಅರೋಗ್ಯ ವಿಚಾರಿಸಿದರು.

ಇದನ್ನೂ ಓದಿ:  Gujarat Plane Crash: ವಿಮಾನ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆ ಅಪ್ಪಳಿಸಿದ್ದರಿಂದ ಬಾಂಬ್ ಸ್ಫೋಟಿಸಿದಂಥ ಸದ್ದು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.