ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತವರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ; ಡಿಕೆ ಶಿವಕುಮಾರ, ಸಿದ್ದರಾಮಯ್ಯ ಜೊತೆ ಮಾತುಕತೆ
ಖರ್ಗೆ ಅವರು ಹೇಳುತ್ತಿರುವುದನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ ವಿಧೇಯ ವಿದ್ಯಾರ್ಥಿಗಳಂತೆ ಕೇಳಿಸಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿರುವ ಸ್ಥಿರಚಿತ್ರಗಳಲ್ಲಿ ನೋಡಬಹುದು.
ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮೇಲೆ ಪ್ರಥಮ ಬಾರಿಗೆ ತಮ್ಮ ತವರು ಜಿಲ್ಲೆ ಕಲಬುರಗಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಗುಂಪಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar), ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಮಾಜಿ ಕೇಂದ್ರ ಸಚಿವ ಕೆ ಹೆಚ್ ಮುನಿಯಪ್ಪ ಕಾಣಲಿಲ್ಲವಾದರೂ ಐವಾನ್-ಶಾಹಿ ಪ್ರವಾಸಿ ಮಂದಿರದಲ್ಲಿ ಖರ್ಗೆ ಮತ್ತು ಇತರ ನಾಯಕರ ಜೊತೆ ಕೂತು ಉಪಹಾರ ಸೇವಿಸಿದರು. ಖರ್ಗೆ ಅವರು ಹೇಳುತ್ತಿರುವುದನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ ವಿಧೇಯ ವಿದ್ಯಾರ್ಥಿಗಳಂತೆ ಕೇಳಿಸಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿರುವ ಸ್ಥಿರಚಿತ್ರಗಳಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos