ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತವರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ; ಡಿಕೆ ಶಿವಕುಮಾರ, ಸಿದ್ದರಾಮಯ್ಯ ಜೊತೆ ಮಾತುಕತೆ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Dec 10, 2022 | 2:19 PM

ಖರ್ಗೆ ಅವರು ಹೇಳುತ್ತಿರುವುದನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ ವಿಧೇಯ ವಿದ್ಯಾರ್ಥಿಗಳಂತೆ ಕೇಳಿಸಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿರುವ ಸ್ಥಿರಚಿತ್ರಗಳಲ್ಲಿ ನೋಡಬಹುದು.

ಕಲಬುರಗಿ:  ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮೇಲೆ ಪ್ರಥಮ ಬಾರಿಗೆ ತಮ್ಮ ತವರು ಜಿಲ್ಲೆ ಕಲಬುರಗಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಗುಂಪಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar), ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಮಾಜಿ ಕೇಂದ್ರ ಸಚಿವ ಕೆ ಹೆಚ್ ಮುನಿಯಪ್ಪ ಕಾಣಲಿಲ್ಲವಾದರೂ ಐವಾನ್-ಶಾಹಿ ಪ್ರವಾಸಿ ಮಂದಿರದಲ್ಲಿ ಖರ್ಗೆ ಮತ್ತು ಇತರ ನಾಯಕರ ಜೊತೆ ಕೂತು ಉಪಹಾರ ಸೇವಿಸಿದರು. ಖರ್ಗೆ ಅವರು ಹೇಳುತ್ತಿರುವುದನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ ವಿಧೇಯ ವಿದ್ಯಾರ್ಥಿಗಳಂತೆ ಕೇಳಿಸಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿರುವ ಸ್ಥಿರಚಿತ್ರಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ