Mallikarjun Kharge; ಮಲ್ಲಿಕಾರ್ಜುನ ಖರ್ಗೆ ಹಣೆಗೆ ಹಚ್ಚಿದ ಕುಂಕುಮವನ್ನು ಬಾಡಿಗಾರ್ಡ್ ಒರೆಸಿದ್ಯಾಕೆ?

Updated on: Apr 26, 2023 | 8:29 PM

ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ, ಖರ್ಗೆ ಅವರ ಹಣೆಗೆ ಹಚ್ಚಿದ್ದ ಕುಂಕುಮವನ್ನು ಅವರ ಬಾಡಿಗಾರ್ಡ್ ಒರೆಸಿದರು. ಈ ವೇಳೆ ಜಗದೀಶ್ ಶೆಟ್ಟರ್ ಸಹ ಉಪಸ್ಥಿತರಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ಕಾವು ರಾಜ್ಯದಾದ್ಯಂತ ಜೋರಾಗಿದೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಹುಬ್ಬಳ್ಳಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆರತಿ ಬೆಳಗಿ ಹಣೆಗೆ ಕುಂಕಮ ಹಚ್ಚಿ ಸ್ವಾಗತಿಸಲಾಯಿತು. ಬಳಿಕ ಸುದ್ದಿಗೋಷ್ಠಿಗೆ ಖರ್ಗೆ ಸುದ್ದಿಗೋಷ್ಠಿಗೆ ಆಗಮಿಸಿದರು. ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ, ಖರ್ಗೆ ಅವರ ಹಣೆಗೆ ಹಚ್ಚಿದ್ದ ಕುಂಕುಮವನ್ನು ಅವರ ಬಾಡಿಗಾರ್ಡ್ ಒರೆಸಿದರು. ಈ ವೇಳೆ ಜಗದೀಶ್ ಶೆಟ್ಟರ್ ಸಹ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More