ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿಯಾಗಲು ಅರ್ಹರು ಎಂದ ಶಾಸಕ ಬಸವರಾಜ ರಾಯರೆಡ್ಡಿ
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನ ಮಂತ್ರಿ ಮಾಡಲು ರಾಹುಲ್ ಗಾಂಧಿಯವರು ತಮ್ಮ ಅಕಾಂಕ್ಷೆಯನ್ನು ತ್ಯಾಗ ಮಾಡುತ್ತಾರೆಯೇ ಎಂದು ಮಾಧ್ಯಮದವರು ಕೇಳುವ ಪ್ರಶ್ನೆಗೆ ಯಲಬುರ್ಗ ಶಾಸಕ ಬಸವರಾಜ ರಾಯರೆಡ್ಡಿಯವರು, ಯಾರಿಗ್ಗೊತ್ತು? ಅವರು ತ್ಯಾಗ ಮಾಡಬಹುದು, ಗಾಂಧಿ ಕುಟುಂಬಕ್ಕೆ ತ್ಯಾಗ ಬಲಿದಾನಗಳು ಹೊಸದೇನೂ ಅಲ್ಲ ಎಂದು ಹೇಳಿದರು.
ಹುಬ್ಬಳ್ಳಿ, ಜುಲೈ 21: ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಭಾವೋದ್ವೇಗದಲ್ಲಿ ಏನೇನೋ ಹೇಳಿಕೆ ನೀಡಿ ನಂತರ ಸಮಜಾಯಿಷಿಗಳನ್ನು ನೀಡುತ್ತಾರೆ. ಇದು ಬಹಳ ಸಲ ಆಗಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪ್ರಧಾನಿ ಮಂತ್ರಿಯಾಗಲು ಅರ್ಹ ವ್ಯಕ್ತಿ ಎಂದು ಹೇಳಿದರು. ತಮ್ಮ ಮಾತನ್ನು ಸಮರ್ಥನೆ ಮಾಡಿಕೊಳ್ಳುತ್ತಾ ಅವರು, ಖರ್ಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ, ಅವರನ್ನು ಎಐಸಿಸಿ ಅಧ್ಯಕ್ಷ ಮಾಡಬೇಕೆಂದು ಹೇಳಿದ್ದು ತಾನು ಮತ್ತು ಪ್ರಧಾನ ಮಂತ್ರಿಯಾಗಲು ಅರ್ಹ ವ್ಯಕ್ತಿಯೆಂದು ಬೆಳಗಾವಿ ಅಧಿವೇಶನದಲ್ಲಿ ತಾನು ಹೇಳಿರುವ ದಾಖಲೆ ಇದೆ ಎಂದು ರಾಯರೆಡ್ಡಿ ಹೇಳಿದರು.
ಇದನ್ನೂ ಓದಿ: ಮುಂದಿನ 3-ವರ್ಷ ಅವಧಿಗೂ ಸಿದ್ದರಾಮಯ್ಯನೇ ಸಿಎಂ ಆಗಿ ಮುಂದುವರಿಯುತ್ತಾರೆ: ಬಸವರಾಜ ರಾಯರೆಡ್ಡಿ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

