ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಖರ್ಗೆ ಹೇಳಿದ್ದಿಷ್ಟು
Mallikarjun Kharge

ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಖರ್ಗೆ ಹೇಳಿದ್ದಿಷ್ಟು

Updated on: Sep 07, 2025 | 1:41 PM

ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ದೇಶಾದ್ಯಂತ ಹೋರಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಶಿಫಾರಸ್ಸು ಮಾಡಿದೆ. ಈ ಮೂಲಕ ತಮ್ಮ ಪಕ್ಷದ ನೇತಾರ ರಾಹುಲ್ ಗಾಂಧಿ ಹೋರಾಟಕ್ಕೆ ಮೊದಲ ಹೆಜ್ಜೆಯಾಗಿ ಸಿದ್ದರಾಮಯ್ಯ ಸರ್ಕಾರ ಈ ತಿರ್ಮಾನ ಕೈಗೊಂಡಿದೆ.ಇನ್ನು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಕರ್ನಾಟಕ ಸರ್ಕಾರದ ನಿರ್ಧಾರ ಶ್ಲಾಘಿಸಿದ್ದಾರೆ.

ಕಲಬುರಗಿ, (ಸೆಪ್ಟೆಂಬರ್ 07): ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ದೇಶಾದ್ಯಂತ ಹೋರಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಶಿಫಾರಸ್ಸು ಮಾಡಿದೆ. ಈ ಮೂಲಕ ತಮ್ಮ ಪಕ್ಷದ ನೇತಾರ ರಾಹುಲ್ ಗಾಂಧಿ ಹೋರಾಟಕ್ಕೆ ಮೊದಲ ಹೆಜ್ಜೆಯಾಗಿ ಸಿದ್ದರಾಮಯ್ಯ ಸರ್ಕಾರ ಈ ತಿರ್ಮಾನ ಕೈಗೊಂಡಿದೆ.ಇನ್ನು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಕರ್ನಾಟಕ ಸರ್ಕಾರದ ನಿರ್ಧಾರ ಶ್ಲಾಘಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಳೆದ ಚುನಾವಣೆ ವೇಳೆ ಇವಿಎಂನಲ್ಲಿ ಮಹಾಮೋಸ ಆಗಿದೆ. ನಾನು ಚುನಾವಣೆಯಲ್ಲಿ ಸೋತಾಗ ಸಹ ಮತಗಳ್ಳತನವಾಗಿತ್ತು. ಅಭಿವೃದ್ಧಿ ಕಾರ್ಯಕ್ಕೆ ಜನಮನ್ನಣೆ ಸಿಕ್ಕಿ ಗೆಲ್ಲುತ್ತೇನೆಂಬ ವಿಶ್ವಾಸವಿತ್ತು. ಆದರೆ ನನ್ನ ನಿರೀಕ್ಷೆ ಹುಸಿಯಾಯಿತು. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ನನಗೆ ಕಡಿಮೆ ಮತ ಬಂದಿದೆ. ನಮ್ಮ ಕಣ್ಣೆದುರೆ ಮೋಸ ಆಗಿದೆ . ಬಿಹಾರ, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧೆಡೆ ಮತಗಳ್ಳತನ ಆಗಿದೆ ಎಂದರು.