ಶಿಗ್ಗಾವಿ ಉಪ ಚುನಾವಣೆಗೆ ಪಠಾಣ್ ಹೆಸರನ್ನು ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ: ಸಿದ್ದರಾಮಯ್ಯ

|

Updated on: Oct 24, 2024 | 7:42 PM

ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸುತ್ತಾರೋ ಅಥವಾ ಎನ್​ಡಿಎ ಅಭ್ಯರ್ಥಿಯೋ ಅನ್ನೋದು ತಮ್ಮ ತಲೆಬಿಸಿ ಅಲ್ಲವೆಂದು ಹೇಳಿದ ಸಿದ್ದರಾಮಯ್ಯ ತಮ್ಮ ಪಕ್ಷದಿಂದ ಯೋಗೇಶ್ವರ್ ಸ್ಪರ್ಧಿಸುತ್ತಾರೆ, ನಾಮಪತ್ರ ಸಲ್ಲಿಕೆಗೆ ತಾನು ಕೂಡ ಹೋಗಿದ್ದೆ, ಅವರು ಗೆಲ್ಲೋದು ನೂರಕ್ಕೆ ನೂರು ನಿಶ್ಚಿತ ಎಂದು ಹೇಳಿದರು.

ಬೆಂಗಳೂರು: ನಗರದಲ್ಲಿಂದು ಕಾರ್ಯಕ್ರಮವೊಂದನ್ನು ಉದ್ಘಾಟಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಒಂದು ಪಟ್ಟಿಯನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳಿಸಲಾಗಿತ್ತು, ಅದರಲ್ಲಿ ಮುಸ್ಲಿಂ ಮತ್ತು ಮುಸ್ಲಿಮೇತರ ಅಭ್ಯರ್ಥಿಗಳ ಹೆಸರುಗಳಿದ್ದವು, ಖರ್ಗೆ ಅವರು ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Follow us on