ಮಲ್ಲಿಕಾರ್ಜುನ ಖರ್ಗೆ 1992 ರಲ್ಲೇ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಪ್ರಯತ್ನ ಮಾಡಿದ್ದರು: ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆ 1992 ರಲ್ಲೇ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಪ್ರಯತ್ನ ಮಾಡಿದ್ದರು: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jan 19, 2023 | 2:27 PM

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಾಂಡಾ ಜನರಿಗೆ ಹಕ್ಕು ಪತ್ರಗಳನ್ನು ನೀಡಲು ಆಗಮಿಸಿರುವುದರಲ್ಲಿ ಬಿಜೆಪಿಯ ಹೆಗ್ಗಳಿಕೆಯೇನೂ ಇಲ್ಲ ಅಂತ ವಿರೋಧ ಪಕ್ಷದ ನಾಯಕ ಹೇಳಿದರು.

ಹುಬ್ಬಳ್ಳಿ: ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ (revenue villages) ಮಾಡಿದ್ದು ತಮ್ಮ ಸಾಧನೆ ಎಂದು ಬಿಜೆಪಿ ಸರ್ಕಾರದ ಪ್ರತಿನಿಧಿಗಳು ಹೇಳಿಕೊಳ್ಳುತ್ತಿದ್ದಾರೆ, ಅದರೆ ಮಲ್ಲಿಕಾರ್ಜುನ ಖರ್ಗೆ ಅವರು 1992 ರಲ್ಲೇ ಈ ದಿಶೆಯಲ್ಲಿ ಪ್ರಯತ್ನ ಮಾಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಹುಬ್ಬಳ್ಳಿಯಲ್ಲಿ ಹೇಳಿದರು. ನಂತರ ತಮ್ಮ ಸಚಿವ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು (Kagodu Thimmappa) ಉಳುವವನೇ ಭೂಮಿಯ ಒಡೆಯ ಯೋಜನೆ ಮಾದರಿಯಲ್ಲೇ ಮನೆಯಲ್ಲಿ ವಾಸಿಸಸುವವನೇ ಅದರ ಒಡೆಯ ಎಂಬ ಕಾನೂನು ಜಾರಿಗೆ ತಂದಿದ್ದರು ಎಂದು ಸಿದ್ದರಾಮಯ್ಯ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ತಾಂಡಾ ಜನರಿಗೆ ಹಕ್ಕು ಪತ್ರಗಳನ್ನು ನೀಡಲು ಆಗಮಿಸಿರುವುದರಲ್ಲಿ ಬಿಜೆಪಿಯ ಹೆಗ್ಗಳಿಕೆಯೇನೂ ಇಲ್ಲ ಅಂತ ವಿರೋಧ ಪಕ್ಷದ ನಾಯಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 19, 2023 02:27 PM