AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಹರೀಶ್ ಜಿ.ಆರ್​.
| Edited By: |

Updated on: Jun 12, 2026 | 2:26 PM

Share

ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಈ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಜನಜಂಗುಳಿಯ ನಡುವೆ ಖರ್ಗೆ ಅವರು ಸಹಿ ಮಾಡಿ ಪ್ರಮಾಣಪತ್ರ ಪಡೆದರು.

ಬೆಂಗಳೂರು, ಜೂನ್​​ 12: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು (ಜೂನ್​​ 12) ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More