Grand Alliance: ಮಲ್ಲಿಕಾರ್ಜುನ ಖರ್ಗೆ, ಸೋನಿಯ ಮತ್ತು ರಾಹುಲ್ ಗಾಂಧಿಯನ್ನು ಹೆಚ್ ಎ ಎಲ್ ಏರ್ಪೋಟ್ ನಲ್ಲಿ ಸ್ವಾಗತಿಸಿದ ಸಿದ್ದರಾಮಯ್ಯ, ಶಿವಕುಮಾರ್
2024 ರ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಎದುರಿಸಲು 24 ವಿರೋಧ ಪಕ್ಷ ಒಂದು ಮಹಾ ಮೈತ್ರಿ ಕೂಟ ರಚಿಸಲು ಸಜ್ಜಾಗುತ್ತಿವೆ.
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯ ಗಾಂಧಿ ಮತ್ತು ರಾಹುಲ್ ಗಾಂಧಿ (Rahul Gandhi) ದೆಹಲಿಯಿಂದ ಇಂದು ವಿಶೇಷ ವಿಮಾನವೊಂದರಲ್ಲಿ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕಾಂಗ್ರೆಸ್ ನಾಯಕರನ್ನು ಸ್ವಾಗತಿಸಿದರು. ರಾಜ್ಯ ಸರ್ಕಾರ ಸಚಿವ ಸಂಫುಟದ ಕೆಲ ಸಚಿವರು ಸಹ ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು. ಇಂದು ಮತ್ತು ನಾಳೆ ನಗರದ ಖಾಸಗಿ ಹೋಟೆಲೊಂದರಲ್ಲಿ 24 ವಿರೋಧ ಪಕ್ಷಗಳ ಮುಖಂಡರ ಸಭೆ ನಡೆಯಲಿದ್ದು ಅದರಲ್ಲಿ ಭಾಗವಹಿಸಲು ಕಾಂಗ್ರೆಸ್ ಪಕ್ಷದ ಗಣ್ಯರು ಆಗಮಿಸಿದ್ದಾರೆ. 2024 ರ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಎದುರಿಸಲು 24 ವಿರೋಧ ಪಕ್ಷ ಒಂದು ಮಹಾ ಮೈತ್ರಿ ಕೂಟ ರಚಿಸಲು ಸಜ್ಜಾಗುತ್ತಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

