AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ ಪ್ರವಾಹದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗಾಗಿ ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ

ನೇಪಾಳ ಪ್ರವಾಹದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗಾಗಿ ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ

ಗಣಪತಿ ಶರ್ಮಾ
|

Updated on: Aug 29, 2026 | 1:25 PM

Share

ನೇಪಾಳದ ಭೀಕರ ಪ್ರವಾಹದಲ್ಲಿ ಸಾವಿನ ಸಂಖ್ಯೆ 584ಕ್ಕೆ ಏರಿದ್ದು, 3,742 ಜನರನ್ನು ರಕ್ಷಿಸಲಾಗಿದೆ, ಆದರೆ 2,500ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 400ಕ್ಕೂ ಹೆಚ್ಚು ಭಾರತೀಯರೂ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ನೆರವು ಕೋರಿದ್ದಾರೆ. ಭಾರತ ಈಗಾಗಲೇ ಪರಿಹಾರ ಸಾಮಗ್ರಿಗಳು ಮತ್ತು ವೈದ್ಯಕೀಯ ನೆರವು ನೀಡುತ್ತಿದೆ.

ನವದೆಹಲಿ, ಆಗಸ್ಟ್ 29: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಸಾವಿನ ಸಂಖ್ಯೆ 584ಕ್ಕೆ ಏರಿದೆ. ಈ ದುರಂತದಲ್ಲಿ 3,742 ಜನರನ್ನು ರಕ್ಷಿಸಲಾಗಿದ್ದು, 2,500ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ 400ಕ್ಕೂ ಅಧಿಕ ಭಾರತೀಯರೂ ಸೇರಿದ್ದಾರೆ. ಚೀನಾ ಗಡಿ ಪ್ರದೇಶದಲ್ಲಿ ಐವರು ಮೃತಪಟ್ಟಿರುವುದು ವರದಿಯಾಗಿದೆ. ಪ್ರವಾಹದಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ಧಾವಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಗಮನಾರ್ಹ ಅಂಶವೆಂದರೆ, ಭಾರತ ಸರ್ಕಾರವು ಈಗಾಗಲೇ ನೇಪಾಳಕ್ಕೆ ವೈದ್ಯಕೀಯ ಸಾಮಗ್ರಿಗಳು, ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಕಳುಹಿಸಿದ್ದು, ಪ್ರವಾಹ ಪೀಡಿತ ನೇಪಾಳಕ್ಕೆ ನೆರವಾಗಲು ಮುಂದಾಗಿದೆ. ನೆರೆವಿಗೆ ಸಿಕ್ಕಿಬಿದ್ದಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಭಾರತದ ವಿದೇಶಾಂಗ ಸಚಿವರು 17 ಕನ್ನಡಿಗರನ್ನು ರಕ್ಷಿಸಿ ಭಾರತಕ್ಕೆ ಕರೆತರಲಾಗಿದೆ ಎಂದು ತಿಳಿಸಿದ್ದು, ಇನ್ನೂ ಸಿಲುಕಿರುವ 200ಕ್ಕೂ ಹೆಚ್ಚು ಭಾರತೀಯರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us