ಕರ್ನಾಟಕ ಸಿಎಂ ರೇಸ್​​ನಲ್ಲಿದ್ದಾರಾ ಮಲ್ಲಿಕಾರ್ಜುನ ಖರ್ಗೆ?: ಸ್ವತಃ ಎಐಸಿಸಿ ಅಧ್ಯಕ್ಷರಿಂದಲೇ ಸಿಕ್ಕು ಸ್ಪಷ್ಟನೆ

Edited By:

Updated on: Apr 30, 2026 | 12:35 PM

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಎದ್ದಿರುವ ಗೊಂದಲಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯಲ್ಲಿ ಮಾತನಾಡಿದ್ದಾರೆ. ನಿರ್ಧಾರ ತೆಗೆದುಕೊಳ್ಳಲು ಸಮಯ ಬೇಕು ಎಂದಿರುವ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಕುರಿತ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಪಕ್ಷದ ನಿರ್ಣಯಗಳು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗುತ್ತವೆ ಎಂದಿದ್ದಾರೆ.

ಕಲಬುರಗಿ, ಏಪ್ರಿಲ್​​ 30: ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ರಾಜ್ಯದ ನಾಯಕತ್ವ ಮತ್ತು ಮುಖ್ಯಮಂತ್ರಿ ಬದಲಾವಣೆ ಕುರಿತು ಹರಿದಾಡುತ್ತಿರುವ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿನ ಗೊಂದಲಗಳನ್ನು ಆದಷ್ಟು ಬೇಗನೆ ಬಗೆಹರಿಸುವುದಾಗಿ ಅವರು ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚೆಗೆ ಕಾಂಗ್ರೆಸ್‌ನ 40-50 ಶಾಸಕರು ದೆಹಲಿಗೆ ಟಿಕೆಟ್ ಕಾಯ್ದಿರಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಖರ್ಗೆ ಅವರೇ ಸಿಎಂ ಆದರೆ ಉತ್ತಮ ಎಂಬ ಗೃಹ ಸಚಿವ ಪರಮೇಶ್ವರ್​​ ಹೇಳಿಕೆಗೂ ಉತ್ತರಿಸಿದ ಅವರು, ನಾನಾದರೆ ಉತ್ತಮ ಅಂತ ನೀವು ಹೇಳ್ತೀರಿ, ಅವರು ಹೇಳ್ತಾರೆ, ಮೇಲಿನವರು ಹೇಳ್ತಾರೆ. ಈಗಾಗಲೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರೆ. ಬದಲಾವಣೆ ಆಗಬೇಕೆಂದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ನಾವು ಸೇರಿ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ, ನೋಡೋಣ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More