AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಲ್ಲಿ ಮಳೆ ಅಬ್ಬರ: ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು

ಮಲೆನಾಡಲ್ಲಿ ಮಳೆ ಅಬ್ಬರ: ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು

ಪ್ರಸನ್ನ ಹೆಗಡೆ
| Edited By: |

Updated on:Jul 07, 2026 | 3:40 PM

Share

ಮುಖ್ಯಾಂಶಗಳು

  • ಮಲೆನಾಡು ಭಾಗದಲ್ಲಿ ಹೆಚ್ಚಿದ ಮಳೆ ಅಬ್ಬರ
  • ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ
  • ಧುಮ್ಮುಕ್ಕುತ್ತಿರುವ ಫಾಲ್ಸ್​​ ಕಂಡು ಪ್ರವಾಸಿಗರು ಖುಷ್​​

Jog Falls: ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿಶ್ವವಿಖ್ಯಾತ ಜೋಗ ಜಲಪಾತವು ಭೋರ್ಗರೆದು ಧುಮ್ಮುಕ್ಕುತ್ತಿದ್ದು, ಪ್ರಕೃತಿಯ ಈ ಅದ್ಭುತ ಜಲವೈಭವವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಫಾಲ್ಸ್​​ ಎದುರು ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಸಾರ್ವಜನಿಕರು ಖುಷಿ ಪಡುತ್ತಿದ್ದಾರೆ.

ಶಿವಮೊಗ್ಗ, ಜುಲೈ 07: ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಹೆಚ್ಚಾದ ಪರಿಣಾಮ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಧುಮ್ಮುಕ್ಕುತ್ತಿರುವ ಫಾಲ್ಸ್​​ ನೋಡಲು ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದ್ದು, ಜಲವೈಭವಕ್ಕೆ ಮನಸೂರೆಗೊಂಡು ಫಾಲ್ಸ್​​ ಎದುರು ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಸಾರ್ವಜನಿಕರು ಖುಷಿ ಪಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 07, 2026 02:46 PM

Follow Us