ದೇವನಹಳ್ಳಿ ಬಳಿ ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ಶಿವಕುಮಾರ್ ಸ್ಥಳದಲ್ಲೇ ಸಾವು!
ಮಾಲೂರು ಬಿಜೆಪಿ ಮುಖಂಡ ಹಾಗೂ ಬಳಕಾಲೂರು ಟಿಕೆಟ್ ಆಕಾಂಕ್ಷಿ ಶಿವಕುಮಾರ್ ದೇವನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರೇಂಜ್ ರೋವರ್ ಕಾರು ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೇವನಹಳ್ಳಿ, ಅಕ್ಟೋಬರ್ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರು ಬಿಜೆಪಿ ಮುಖಂಡ ಹಾಗೂ ಬಳಕಾಲೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಕುಮಾರ್ (50) ಮೃತಪಟ್ಟಿದ್ದಾರೆ. ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಹೊಸಕೋಟೆ-ದಾಬಸ್ಪೇಟೆಯ ರಿಂಗ್ ರಸ್ತೆಯ ಹೆದ್ದಾರಿಯಲ್ಲಿ ಓವರ್ಟೇಕ್ ಮಾಡುವ ಭರದಲ್ಲಿ, ಮುಂದೆ ಸಾಗುತ್ತಿದ್ದ ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರೇಂಜ್ ರೋವರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 14, 2026 08:45 AM
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ನಾಯಕರನ್ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ

