ದೇವನಹಳ್ಳಿ ಬಳಿ ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ಶಿವಕುಮಾರ್ ಸ್ಥಳದಲ್ಲೇ ಸಾವು!

Edited By:

Updated on: Oct 14, 2026 | 8:45 AM

ಮಾಲೂರು ಬಿಜೆಪಿ ಮುಖಂಡ ಹಾಗೂ ಬಳಕಾಲೂರು ಟಿಕೆಟ್ ಆಕಾಂಕ್ಷಿ ಶಿವಕುಮಾರ್ ದೇವನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರೇಂಜ್ ರೋವರ್ ಕಾರು ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೇವನಹಳ್ಳಿ, ಅಕ್ಟೋಬರ್ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರು ಬಿಜೆಪಿ ಮುಖಂಡ ಹಾಗೂ ಬಳಕಾಲೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಕುಮಾರ್ (50) ಮೃತಪಟ್ಟಿದ್ದಾರೆ. ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಹೊಸಕೋಟೆ-ದಾಬಸ್​ಪೇಟೆಯ ರಿಂಗ್ ರಸ್ತೆಯ ಹೆದ್ದಾರಿಯಲ್ಲಿ ಓವರ್‌ಟೇಕ್ ಮಾಡುವ ಭರದಲ್ಲಿ, ಮುಂದೆ ಸಾಗುತ್ತಿದ್ದ ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರೇಂಜ್ ರೋವರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More