Video:ಸುಪ್ರೀಂನಲ್ಲಿ ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

Updated on: Feb 04, 2026 | 12:17 PM

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್​​ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್​ಗೆ ತೆರಳಿದ್ದರು.

ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್​​ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್​ಗೆ ತೆರಳಿದ್ದರು.

ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ.ಮಮತಾ ಬ್ಯಾನರ್ಜಿ, ಮೋಸ್ತಾರಿ ಬಾನೋ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರಾದ ಡೆರೆಕ್ ಒ’ಬ್ರೇನ್ ಮತ್ತು ಡೋಲಾ ಸೇನ್ ಅವರು ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಹಲವಾರು ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More