AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ!

ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ!

ಸುಷ್ಮಾ ಚಕ್ರೆ
|

Updated on: Jun 02, 2026 | 7:19 PM

Share

ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಹಣ ಹಾಗೂ ವಿವಿಧ ಯೋಜನೆಗಳ ಅನುದಾನವನ್ನು ತಡೆಹಿಡಿದಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಕೊಲ್ಕತ್ತಾದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಿದ್ದರು. ವೇದಿಕೆಯ ಮೇಲೆ ನಿಂತು "ಬಂಗಾಳದ ಹಕ್ಕುಗಳಿಗಾಗಿ ನಾವು ಸಾಯುವವರೆಗೂ ಹೋರಾಡಲು ಸಿದ್ಧ" ಎಂದು ಮಾಜಿ ಸಿಎಂ ಮಮತಾ ಗುಡುಗಿದ್ದಾರೆ. ಈ ಪ್ರತಿಭಟನೆಯಲ್ಲಿ ಟಿಎಂಸಿ ಪಕ್ಷದ ನೂರಾರು ಶಾಸಕರು ಮತ್ತು ಸಂಸದರ ಪೈಕಿ ಕೇವಲ 5 ಶಾಸಕರು, 3 ಸಂಸದರು ಮಾತ್ರ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಇಡೀ ದಿನ ಮಮತಾ ಬ್ಯಾನರ್ಜಿ ಏಕಾಂಗಿಯಾಗಿಯೇ ವೇದಿಕೆಯನ್ನು ನಿಭಾಯಿಸಬೇಕಾಯಿತು.

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. “ಹೋರಾಡುತ್ತೇವೆ ಇಲ್ಲವೇ ಸಾಯುತ್ತೇವೆ” ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು ಮತ್ತು 3 ಸಂಸದರು ಮಾತ್ರ ಹಾಜರಾಗುವ ಮೂಲಕ ಮಮತಾ ಬ್ಯಾನರ್ಜಿಗೆ ಸ್ವಪಕ್ಷದವರಿಂದಲೇ ಭಾರಿ ಮುಖಭಂಗವಾಗಿದೆ.

ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಹಣ ಹಾಗೂ ವಿವಿಧ ಯೋಜನೆಗಳ ಅನುದಾನವನ್ನು ತಡೆಹಿಡಿದಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಕೊಲ್ಕತ್ತಾದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಿದ್ದರು. ವೇದಿಕೆಯ ಮೇಲೆ ನಿಂತು “ಬಂಗಾಳದ ಹಕ್ಕುಗಳಿಗಾಗಿ ನಾವು ಸಾಯುವವರೆಗೂ ಹೋರಾಡಲು ಸಿದ್ಧ” ಎಂದು ಮಾಜಿ ಸಿಎಂ ಮಮತಾ ಗುಡುಗಿದ್ದಾರೆ. ಈ ಪ್ರತಿಭಟನೆಯಲ್ಲಿ ಟಿಎಂಸಿ ಪಕ್ಷದ ನೂರಾರು ಶಾಸಕರು ಮತ್ತು ಸಂಸದರ ಪೈಕಿ ಕೇವಲ 5 ಶಾಸಕರು, 3 ಸಂಸದರು ಮಾತ್ರ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಇಡೀ ದಿನ ಮಮತಾ ಬ್ಯಾನರ್ಜಿ ಏಕಾಂಗಿಯಾಗಿಯೇ ವೇದಿಕೆಯನ್ನು ನಿಭಾಯಿಸಬೇಕಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More