Video: ‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ವ್ಯಕ್ತಿಯೊಬ್ಬ ಗೋಲಿ ಚಲ್ ಜಾವೇಗಿ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿರುವ ಉತ್ತರ ಪ್ರದೇಶದ, ಮಹೋಬಾ ಜಿಲ್ಲೆಯಲ್ಲಿ ನಡೆದಿದೆ. ಧಾರ್ಮಿಕ ಕುವಾನ್ ಪೂಜನ್ ಸಮಾರಂಭ ನಡೆಯುತ್ತಿತ್ತು. ಈ ವೇಳೆ ನೃತ್ಯಗಾರ್ತಿಯರನ್ನು ಕರೆಸಲಾಗಿತ್ತು. ಗೋಲಿ ಚಲ್ ಚಾವೇಗಿ ಹಾಡಿಗೆ ನೃತ್ಯ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿದೆ. ಪರಿಣಾಮವಾಗಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಲಕ್ನೋ, ಜುಲೈ 06: ವ್ಯಕ್ತಿಯೊಬ್ಬ ಗೋಲಿ ಚಲ್ ಜಾವೇಗಿ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿರುವ ಉತ್ತರ ಪ್ರದೇಶದ, ಮಹೋಬಾ ಜಿಲ್ಲೆಯಲ್ಲಿ ನಡೆದಿದೆ. ಧಾರ್ಮಿಕ ಕುವಾನ್ ಪೂಜನ್ ಸಮಾರಂಭ ನಡೆಯುತ್ತಿತ್ತು. ಈ ವೇಳೆ ನೃತ್ಯಗಾರ್ತಿಯರನ್ನು ಕರೆಸಲಾಗಿತ್ತು. ಗೋಲಿ ಚಲ್ ಚಾವೇಗಿ ಹಾಡಿಗೆ ನೃತ್ಯ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿದೆ. ಪರಿಣಾಮವಾಗಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಆ ಗುಂಡು 21 ವರ್ಷದ ರಾಧಾ ಮತ್ತು ರಮಾ ಎಂಬ ಇಬ್ಬರು ಮಹಿಳೆಯರಿಗೆ ತಗುಲಿ, ಅವರ ಕಾಲುಗಳಿಗೆ ಗಾಯವಾಯಿತು.ಸಂತ್ರಸ್ತರಲ್ಲಿ ಒಬ್ಬರ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಅಮಿತ್ ಅಹಿರ್ವರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಪ್ರಸ್ತುತ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ