ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ, ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್
ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಮಂಗಳೂರು: ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ (assaulted) ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳಿಂದ ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಉಪ್ಪಿನಂಗಡಿಯ ಮಗು ಒಂದಕ್ಕೆ ಆರೋಗ್ಯ ಸಮಸ್ಯೆ ಹಿನ್ನೆಲೆ ಮುಸ್ಲಿಂ ಕುಟುಂಬದಿಂದ ಮಂತ್ರವಾದಿಗಳ ಸಂಪರ್ಕ ಮಾಡಿದ್ದಾರೆ. ವಾರದ ಹಿಂದೆ ಮನೆಗೆ ಹೋಗಿ ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಿದ್ದಾರೆ. ನಕಲಿ ಮಂತ್ರವಾದಿಯ ಪರಿಚಯದ ವ್ಯಕ್ತಿ ಅದೇ ಮನೆಗೆ ಬಂದಿದ್ದರು. ಈ ವೇಳೆ ಇವರ ವಂಚನೆ ಕಂಡು ಮನೆಯಲ್ಲೇ ನಕಲಿ ಮಂತ್ರವಾದಿ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಕರಣ ಠಾಣೆಯ ಮೆಟ್ಟಿಲೇರಿ ಬಳಿಕ ಮಾತುಕತೆಯ ಮೂಲಕ ಬಗೆಹರಿದಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್ಮೆಂಟ್ ಬಗ್ಗೆ ರಾಕೇಶ್ ಮಾತು

ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?

ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ

ಯುವತಿಗೆ ಪ್ರೊಪೋಸ್ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
