Muharram: ಚಿತ್ರದುರ್ಗದಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ ಮಗುವಿನೊಂದಿಗೆ ಬೆಂಕಿಗೆ ಬಿದ್ದ ವ್ಯಕ್ತಿ

Edited By: ಆಯೇಷಾ ಬಾನು

Updated on: Jul 30, 2023 | 1:14 PM

ಮೊಹರಂ ಹಬ್ಬದ ಆಚರಣೆ ವೇಳೆ ಕೊಂಡ ಹಾಯುವಾಗ ಮಗು ಜೊತೆ ಕಾಲು ಜಾರಿ ವ್ಯಕ್ತಿ ಬಿದ್ದ ಘಟನೆ ಚಿತ್ರದುರ್ಗ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ, ಜುಲೈ 30: ಮೊಹರಂ ಹಬ್ಬದ ಆಚರಣೆ ವೇಳೆ ಕೊಂಡ ಹಾಯುವಾಗ ಮಗು ಜೊತೆ ಕಾಲು ಜಾರಿ ವ್ಯಕ್ತಿ ಬಿದ್ದ ಘಟನೆ ಚಿತ್ರದುರ್ಗ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಕೊಂಡ ಹಾಯಲಾಗುತ್ತಿತ್ತು. ಈ ವೇಳೆ ರಮೇಶ್ ಎಂಬ ವ್ಯಕ್ತಿ ಮಗುವನ್ನು ಎತ್ತಿಕೊಂಡು ಅಗ್ನಿ ಕೊಂಡ ಹಾಯಲು ಯತ್ನಿಸಿದ್ದಾರೆ. ಆಗ ಕಾಲು ಜಾರಿ ಬಿದ್ದಿದ್ದು ರಮೇಶ್ ಹಾಗೂ ಮಗುವಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಕೆಂಡದಲ್ಲಿ ಬಿದ್ದ ಪುಟ್ಟ ಮಗು​ ಪ್ರಾಣಾಪಾಯದಿಂದ ಪಾರಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published on: Jul 30, 2023 01:10 PM
Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More