ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Edited By:

Updated on: Mar 17, 2026 | 9:41 PM

ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

ಮಂಗಳೂರು, (ಮಾರ್ಚ್ 17): ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

ಸುರತ್ಕಲ್‌ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿ ಮಹಮ್ಮದ್ ಶರೀಫ್ ಸುಮಾರು 2 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದ್ದ. ಆದರೆ ಮೋಹನ್ ದಾಸ್ ಶೆಟ್ಟಿ ಮೋಸ ಮಾಡಿರುವ ಸಿಟ್ಟಿನಲ್ಲಿ ಆತ ಸ್ಕೂಟರ್​​ನಲ್ಲಿ ತೆರಳುವಾಗ ಮಹಮ್ಮದ್ ಶರೀಫ್ ಕಾರಿನಿಂದ ಗುದ್ದಿ ಕೊಲೆ ಯತ್ನ ನಡೆಸಿದ್ದಾನೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಸದ್ಯ ಮಹಮ್ಮದ್ ಶರೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 17, 2026 09:30 PM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More