ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

Updated on: Apr 12, 2026 | 3:20 PM

ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ ಆಂಜಿನಪ್ಪ ಮನೆಗೆ ತೆರಳಿ ಗೇಟಿನಲ್ಲಿ ಕಟ್ಟಿದ್ದ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಮನಬಂದಂತೆ ಹೊಡೆದು ಕ್ರೌರ್ಯ ಮೆರೆದಿದ್ದಾನೆ.

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ ಆಂಜಿನಪ್ಪ ಮನೆಗೆ ತೆರಳಿ ಗೇಟಿನಲ್ಲಿ ಕಟ್ಟಿದ್ದ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಮನಬಂದಂತೆ ಹೊಡೆದು ಕ್ರೌರ್ಯ ಮೆರೆದಿದ್ದಾನೆ. ಗೋಪಿಯ ಹೊಡೆತಕ್ಕೆ ಸ್ಕೂಬಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೂಡಲೇ ಮಾಲೀಕ ಅಂಜಿನಪ್ಪ ಸ್ಕೂಬಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಸದ್ಯ ನಾಯಿ ಪ್ರಾಣಾಪಾಯದಿಂದ ಪಾರಾಗಿದೆ. ನಾಯಿ‌ಗೆ ಹೊಡೆದ ದೃಶ್ಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More