ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಎದುರು ಆತ್ಮಹತ್ಯೆಗೆ ಯತ್ನಿಸಿದ ಪತಿ
ಬೆಂಗಳೂರಿನ ಆರ್.ಟಿ.ನಗರದ ವ್ಯಕ್ತಿಯೊಬ್ಬ ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಎದುರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ದೂರು ದಾಖಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆರೋಪಿಸಿದ್ದಾರೆ. ಸ್ಥಳೀಯರು ವ್ಯಕ್ತಿಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತ್ಮಹತ್ಯೆಗೆ ಮುನ್ನ ಅವರು ಡೆತ್ ನೋಟ್ ಬರೆದಿದ್ದಾನೆ.
ಬೆಂಗಳೂರು, ಏಪ್ರಿಲ್ 13: ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ (Raj Bhavan) ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆತ್ನಹತ್ಯೆಗೆ ಯತ್ನಿಸಿದ ವ್ಯಕ್ತಿ ಮೂಲತಃ ಬೆಂಗಳೂರಿನ (Bengaluru) ಆರ್.ಟಿ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಪತ್ನಿ ಕಿರುಕುಳ ನೀಡುತ್ತಿರುವ ಬಗ್ಗೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆರೋಪಿಸಿದ್ದಾರೆ. “ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ, ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಸದ್ಯ ವಿಧಾನಸೌಧ ಠಾಣೆಯ ಪೊಲೀಸರು ವ್ಯಕ್ತಿಯನ್ನು ಕರೆದೊಯ್ದಿದ್ದಾರೆ. ಇನ್ನು, ಆತ್ಮಹತ್ಯೆಗೂ ಮುನ್ನ ಪುಟಗಟ್ಟಲೆ ಡೆತ್ ನೋಟ್ ಬರೆದಿದ್ದಾರೆ.