ಪೆಟ್ರೋಲ್​ ಬಂಕ್​ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಕೆಡವಿ ಹೊಡೆದ ವ್ಯಕ್ತಿ; ವಿಡಿಯೋ ಇಲ್ಲಿದೆ

|

Updated on: Oct 28, 2024 | 8:42 PM

ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಕಿಕ್ಕಿರಿದ ಪೆಟ್ರೋಲ್ ಪಂಪ್‌ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಬೀಳಿಸಿ, ಆಕೆಯನ್ನು ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನೊಯ್ಡಾ: ಪೆಟ್ರೋಲ್ ಪಂಪ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಗೆ ಕ್ರೂರವಾಗಿ ಥಳಿಸುತ್ತಿರುವ ಭಯಾನಕ ವೀಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ. ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಸುತ್ತಲೂ ನಿಂತಿದ್ದ ಜನ ನೋಡುತ್ತಾ ನಿಂತಿದ್ದಾರೆ. ಯಾರೂ ಆ ಮಹಿಳೆಗೆ ಸಹಾಯ ಮಾಡಲು ಧೈರ್ಯ ಮಾಡಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ