ಲಂಡನ್‌ನ ಟರ್ಕಿಶ್ ರಾಯಭಾರ ಕಚೇರಿ ಹೊರಗೆ ಕುರಾನ್ ಸುಟ್ಟ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ
ಆಘಾತಕಾರಿ ಘಟನೆಯಲ್ಲಿ, ಟರ್ಕಿಶ್ ರಾಯಭಾರ ಕಚೇರಿಯ ಹೊರಗೆ ಮುಸ್ಲಿಮರ ಪವಿತ್ರ ಗ್ರಂಥವಾದ ಕುರಾನ್‌ಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ನಂತರ ವ್ಯಕ್ತಿಯೊಬ್ಬ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಗುರುವಾರ ಮಧ್ಯಾಹ್ನ ನೈಟ್ಸ್‌ಬ್ರಿಡ್ಜ್‌ನಲ್ಲಿರುವ ಟರ್ಕಿಶ್ ಕಾನ್ಸುಲೇಟ್ ಬಳಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ದೃಶ್ಯಗಳಲ್ಲಿ, ಕುರಾನ್ ಪುಸ್ತಕಕ್ಕೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿ, ಅದು ಸುಟ್ಟುಹೋದಾಗ ಅದನ್ನು ಎತ್ತಿ ಹಿಡಿದಿರುವುದನ್ನು ತೋರಿಸಲಾಗಿದೆ.
ನವದೆಹಲಿ: ಲಂಡನ್‌ನಲ್ಲಿರುವ ಟರ್ಕಿಶ್ ರಾಯಭಾರ ಕಚೇರಿಯ ಹೊರಗೆ ವ್ಯಕ್ತಿಯೊಬ್ಬ ಕುರಾನ್ ಅನ್ನು ಸುಡಲು ಯತ್ನಿಸಿದ್ದಾನೆ. ಇದಾದ ನಂತರ ಆತನ ಮೇಲೆ ವ್ಯಕ್ತಿಯೊಬ್ಬ ಕೋಪದಿಂದ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ನೈಟ್ಸ್‌ಬ್ರಿಡ್ಜ್‌ನಲ್ಲಿರುವ ಟರ್ಕಿಶ್ ಕಾನ್ಸುಲೇಟ್ ಬಳಿ ನಡೆದ ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕುರಾನ್‌ಗೆ ಬೆಂಕಿ ಹಚ್ಚಿದ್ದರಿಂದ ಚಾಕುವಿನ ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವನ ಬೆರಳುಗಳ ಮೇಲೆ ಆಗಿರುವ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us