ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ

ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on:Jul 20, 2024 | 11:15 AM

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆ ನಡೆದಿದೆ. ಓರ್ವ ವ್ಯಕ್ತಿ ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿಕೊಂಡು ಎಳೆದೊಯ್ದಿದ್ದಾನೆ. ವ್ಯಕ್ತಿ ಶಿರ್ವ ಪೇಟೆಯಲ್ಲಿ ನಾಯಿಯ ಕೊರಳಿಗೆ ಸರಪಳಿ ಹಾಕಿ, ಸ್ಕೂಟರ್‌ನ ಸೀಟಿಗೆ ಸರಪಳಿ ​​ಕಟ್ಟಿಕೊಂಡು ಸುಮಾರು ದೂರ ಎಳೆದೊಯ್ದು ವಿಕೃತಿ ಮೆರೆದಿದ್ದಾನೆ.

ಉಡುಪಿ (Udupi) ಜಿಲ್ಲೆಯ ಕಾಪು (Kapu) ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆ ನಡೆದಿದೆ. ಖಾದರ್ ಎಂಬುವರು ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿಕೊಂಡು ಎಳೆದೊಯ್ದಿದ್ದಾನೆ.  ಕಾಪು ತಾಲೂಕಿನ ಕೊಂಬಗುಡ್ಡೆ ನಿವಾಸಿ ಖಾದರ್​​ ಸತ್ತು ಹೋಗಿದ್ದ ನಾಯಿಯನ್ನು ಸ್ಕೂಟಿಗೆ ಕಟ್ಟಿಕೊಂಡು ಕೊಂಬಗುಡ್ಡೆಯಿಂದ ಶಿರ್ವಪೇಟೆಯವರೆಗೆ ಸುಮಾರು 5 ಕಿಮೀ ಎಳೆದೊಯ್ದಿದ್ದಾನೆ. ನಾಯಿ ಎಳೆದೊಯ್ದ ವಿಡಿಯೋ ವೈರಲ್ ಬೆನ್ನಲ್ಲೇ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾದರ್​ನ ಹೀನ ಕೃತ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Jul 20, 2024 10:27 AM