ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ಶಾಕಿಂಗ್ ವಿಡಿಯೋ ವೈರಲ್

Updated on: Sep 11, 2024 | 3:50 PM

ಪಾಲಿಕೆಯ ಅಧಿಕಾರಿಗಳು ಚರಂಡಿಗಾಗಿ ಹೊಂಡ ತೋಡಿದ್ದರು. ವ್ಯಕ್ತಿಯೊಬ್ಬರು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿದೆ. ಅನಿರೀಕ್ಷಿತವಾಗಿ ಬೈಕ್​ನಲ್ಲಿ ಹೋಗುತ್ತಿದ್ದ ಮೂವರು ಆಳವಾದ ಹೊಂಡಕ್ಕೆ ಬಿದ್ದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಒಂಡಿಪುತ್ತೂರು ಭಾಗದಲ್ಲಿ ಒಳಚರಂಡಿಗಾಗಿ ನಗರಸಭೆ ಅಧಿಕಾರಿಗಳು ಹೊಂಡ ತೋಡಿದ್ದರು. ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿದೆ. ಅನಿರೀಕ್ಷಿತವಾಗಿ ಬೈಕ್​ನಲ್ಲಿ ಹೋಗುತ್ತಿದ್ದ ಮೂವರು ಆಳವಾದ ಹೊಂಡಕ್ಕೆ ಬಿದ್ದಿದ್ದಾರೆ. ಅದೃಷ್ಟವಶಾತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More