ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿಳಿದವನ ಚಪ್ಪಲಿಗಳಲ್ಲಿ ರೂ. 70 ಲಕ್ಷ ಮೌಲ್ಯದ ಚಿನ್ನದ ಗಟ್ಟಿಗಳು!

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2023 | 5:22 PM

ಚಿನ್ನದ ಸ್ಮಗ್ಲರ್ ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಅವನಿಂದ ಸುಮಾರು ರೂ. 70 ಲಕ್ಷ ಮೌಲ್ಯದ ಒಂದೂಕಾಲು ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಬೇರೆ ದೇಶಗಳಿಂದ ಚಿನ್ನವನ್ನು ಕಳ್ಳಸಾಗಣೆ (smuggling) ಮಾಡಿಕೊಂಡು ಬರುವ ಕಳ್ಳರು ಚಾಪೆ ಕೆಳಗೆ ತೂರಿದರೆ ವಿಮಾನ ನಿಲ್ದಾಣಗಳಲ್ಲಿ ಕರ್ತವ್ಯ ನಿರ್ವಹಿಸುವ ಕಸ್ಟಮ್ಸ್ ಅಧಿಕಾರಿಗಳು ರಂಗೋಲಿ ಕೆಳಗೆ ತೂರುತ್ತಾರೆ ಮಾರಾಯ್ರೇ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (BIA) ಅಧಿಕಾರಿಗಳು ಅಂಥ ಬುದ್ಧಿವಂತಿಕೆ ಪ್ರದರ್ಶಿಸಿ ಚಪ್ಪಲಿಗಳ ತಳಭಾಗದಲ್ಲಿ ಚಿನ್ನದ ಗಟ್ಟಿಗಳನ್ನು ಸ್ಮಗಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ವಶಕ್ಕೆ ಪಡೆದು ದೇವನಹಳ್ಳಿ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಚಿನ್ನದ ಸ್ಮಗ್ಲರ್ ಬ್ಯಾಂಕಾಕ್ ನಿಂದ (Bangkok) ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಅವನಿಂದ ಸುಮಾರು ರೂ. 70 ಲಕ್ಷ ಮೌಲ್ಯದ ಒಂದೂಕಾಲು ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.