ಹಿಂದೂಗಳನ್ನು ಸಾಯಿಸಲು ಬಂದಿದ್ದೆನೆ ಎಂದು ರಸ್ತೆ ಮದ್ಯೆ ವ್ಯಕ್ತಿಯ ಆವಾಜ್‌; ವೀಡಿಯೋ ವೈರಲ್

Edited By:

Updated on: Oct 20, 2025 | 9:20 AM

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಬಳಿ ಹಿಂದುಗಳನ್ನು ಬಾಂಬ್ ಹಾಕಿ ಸಾಯಿಸುತ್ತೇನೆ ಎಂದು ಧಮ್ಕಿ ಹಾಕಿದ  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಮೊಹ್ಮದ್ ಖಾಲೀದ್ (50) ಎಂಬ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದಾವಣಗೆರೆ, ಅಕ್ಟೋಬರ್ 20: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಬಳಿ ಹಿಂದುಗಳನ್ನು ಬಾಂಬ್ ಹಾಕಿ ಸಾಯಿಸುತ್ತೇನೆ ಎಂದು ಧಮ್ಕಿ ಹಾಕಿದ  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಮೊಹ್ಮದ್ ಖಾಲೀದ್ (50) ಎಂಬ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆತನ ಕುಟುಂಬದ ಪ್ರಕಾರ, ಖಾಲೀದ್ ಮಾನಸಿಕ ಅಸ್ವಸ್ಥನಾಗಿದ್ದು,  ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈರಲ್ ವೀಡಿಯೋ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More